Student Council Inauguration

‘ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವವವನ್ನು ಬಿಟ್ಟು ಧೈರ್ಯವಾಗಿ ಮುಂದೆ ಬಂದು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕೆಂದು’ ತುಂಬೆ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದಿನೇಶ್ ಶೆಟ್ಟಿ ಹೇಳಿದರು.

ಬಿ.ಇ.ಎಂ. ಅನುದಾನಿತ ಪ. ಪೂ. ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾವು ಪ್ರತಿಭಾವಂತರಲ್ಲಿ ಎಂದು ಯಾರೂ ಕೂಡ ಭಾವಿಸಬಾರದು. ಕಲಿಕೆಯ ಅವಧಿಯಲ್ಲಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕೆಂದರು. ಕಾಲೇಜಿನ ಆಡಳಿತ ಅಧಿಕಾರಿ ಡಾ| ಕುಸುಮ್ ಅಧ್ಯಕ್ಷತೆ ವಹಿಸಿದ್ದರು.

ಆಡಳಿತ ಮಂಡಳಿಯ ಸದಸ್ಯ ವಿನಯ್ ಕಾರಟ್, ಬಿ.ಇ.ಎಂ. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎ.ಎಂ. ರಫೀಯುದ್ದೀನ್, ಮುಖ್ಯ ಶಿಕ್ಷಕಿ ಫ್ರೀಡಾ ಮಾಬೆನ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಚೈತ್ರ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕಿ ಸ್ವಪ್ನ ಮನೀಶ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ನೆರವೇರಿಸಿದರು.

ಪ್ರಭಾರ ಪ್ರಾಂಶುಪಾಲ ರೋಶನ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿ ಮೋಹನ್ ರಾಜ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಅಲ್‍ಫಝ್ ವಂದಿಸಿದರು.

[fancygallery id=”2″ album=”57″]

No Comment

You can post first response comment.